Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:66 - ಕನ್ನಡ ಸತ್ಯವೇದವು C.L. Bible (BSI)

66 ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಕೇಳಿದವರೆಲ್ಲರೂ - ಆಹಾ, ಈ ಕೂಸು ಎಂಥವನಾಗುವನೋ ಎಂದು ಈ ಸಂಗತಿಗಳನ್ನು ಮನಸ್ಸಿನಲ್ಲಿಟ್ಟುಕೊಂಡರು ಮತ್ತು ಕರ್ತನ ಹಸ್ತವು ಅದರ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಕೇಳಿದವರೆಲ್ಲರೂ ವಿಸ್ಮಯಗೊಂಡು, “ಈ ಮಗುವು ಎಂಥವನಾಗುವನೋ?” ಎಂದು ತಮ್ಮ ಮನಸ್ಸಿನಲ್ಲಿ ಪ್ರಶ್ನಿಸಿಕೊಂಡರು. ಕರ್ತದೇವರ ಹಸ್ತವು ಈ ಮಗುವಿನ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

66 ಹಿ ಖಬರ್ ಆಯ್ಕಲ್ಲೆ ಸಗ್ಳೆ ಜಾನಾ “ಹ್ಯೊ ಪೊರ್ ಫಿಡೆ ಕಾಯ್ ಹೊತಾ ಅಸಿಲ್?” ಮನುನ್ ಇಚಾರುಕ್‍ಲಾಲೆ, ದೆವಾಚೊ ಬಳ್ ತ್ಯಾ ಪೊರಾ ವರ್‍ತಿ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:66
16 ತಿಳಿವುಗಳ ಹೋಲಿಕೆ  

ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಮರಿಯಳಾದರೋ ಈ ವಿಷಯಗಳನ್ನೆಲ್ಲಾ ಮನಸ್ಸಿನಲ್ಲಿಯೇ ಇಟ್ಟುಕೊಂಡು ಆಲೋಚಿಸುತ್ತಾ ಬಂದಳು.


ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.


“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.


ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. (ಇದಲ್ಲದೆ) ದೈವಾನುಗ್ರಹ ಅವರ ಮೇಲಿತ್ತು.


ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ನನ್ನ ಕೈಯ ಆಸರೆ ಅವನಿಗಿದೆ ಸತತ I ನನ್ನ ಭುಜಬಲವು ಅವನಿಗೆ ಶಕ್ತಿಯುತ II


ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.


ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಅಣ್ಣಂದಿರೋ ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ತಂದೆ ಈ ವಿಷಯವನ್ನು ಮನಸ್ಸಿನಲ್ಲೇ ಮೆಲುಕುಹಾಕಿದ.


ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ಧರಿಸಿದ ಪುರುಷನನು I ನಿನಗೆಂದೇ ನೀ ಸಾಕಿ ಬೆಳೆಸಿದಾ ವರಪುತ್ರನನು II


ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು