Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:68 - ಕನ್ನಡ ಸತ್ಯವೇದವು C.L. Bible (BSI)

68 ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 “ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68-70 ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಶ್ರೀಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಪರಾಮರಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣವೀರನನ್ನು ಎಬ್ಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 “ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

68 ಇಸ್ರಾಯೆಲಾಚ್ಯಾ ದೆವಾಚಿ ಸರ್ವೆಸ್ವರಾಚಿ ಸ್ತುತಿ ಕರುವಾ! ತೊ ಅಪ್ನಾಚ್ಯಾ ಲೊಕಾಂಚ್ಯಾ ಆದಾರಾಕ್ ಯೆಲೊ, ಅನಿ ತೆಂಕಾ ಸ್ವತಂತ್ರ್ ಕರುಕ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:68
24 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


"ಸ್ತೋತ್ರ, ಶೇಮನ ದೇವರಾದ ಸರ್ವೇಶ್ವರನಿಗೆ ದಾಸನಾಗಲಿ ಕಾನಾನನು ಶೇಮನಿಗೆ"


ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಇಸ್ರಯೇಲನು ಉದ್ಧರಿಸುವನಾತ I ಅದು ಗೈದ ಸಕಲ ದೋಷಗಳಿಂದ II


‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II


ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟುಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರು ದಿನಗಳು ಆಗಿವೆ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು