Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:69 - ಕನ್ನಡ ಸತ್ಯವೇದವು C.L. Bible (BSI)

69 ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

69 ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

69 ತನ್ನ ಸೇವಕನಾದ ದಾವೀದನ ಮನೆತನದಿಂದ ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

69-70 ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

69 ತೆನಿ ಅಪ್ನಾಚ್ಯಾ ಸೆವಕಾಚ್ಯಾ ದಾವಿದಾಚ್ಯಾ ಘರಾನ್ಯಾತ್ನಾ, ಅಮ್ಕಾ ಎಕ್ ಲೈ ಮೊಟೊ ಸುಟ್ಕಾ ದಿತಲೊ ಮಾನುಸ್ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:69
23 ತಿಳಿವುಗಳ ಹೋಲಿಕೆ  

ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


“ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.


ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ನಮ್ಮ ಪೂರ್ವಜ ದಾವೀದನ ಸಾಮ್ರಾಜ್ಯ ಉದಯವಾಗಲಿದೆ; ಅದಕ್ಕೆ ಶುಭವಾಗಲಿ ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ !” ಎಂದು ಘೋಷಿಸುತ್ತಿದ್ದರು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ I ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ : II


ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.


‘ಸರ್ವಶಕ್ತರಾದ ಸರ್ವೆಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು