Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:78 - ಕನ್ನಡ ಸತ್ಯವೇದವು C.L. Bible (BSI)

78 ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

78 “ನಮ್ಮ ದೇವರ ಮಹಾಕರುಣೆಯಿಂದ ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

78 ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

78 ಅಮ್ಚೊ ದೆವ್ ಕನ್ನಾಬಿ ದಯಾ ದಾಕ್ವುತಲೊ ಅನಿ ಸಗ್ಳೆ ದಿತಲೊ. ಅನಿ ತೊ ಅಮ್ಚ್ಯಾ ವರ್‍ತಿ ಸುಟ್ಕಾ ದಿತಲೊ ಮೊಟೊ ಉಜ್ವೊಡ್ ಫಾಕಿ ಸಾರ್ಕೊ ಕರ್‍ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:78
19 ತಿಳಿವುಗಳ ಹೋಲಿಕೆ  

ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು