Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:8 - ಕನ್ನಡ ಸತ್ಯವೇದವು C.L. Bible (BSI)

8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲಾಗಿ ಜಕರೀಯನ ವರ್ಗದ ಸರತಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡಿಸುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಎಕ್ ದಿಸ್ ಅಪ್ನಾಚಿ ಪಾಳಿ ಯೆಲ್ಲ್ಯಾ ತನ್ನಾ ಜೆಕರಿಯಾ ದೆವಾಚ್ಯಾ ಗುಡಿತ್ ಅಪ್ನಾಚೆ ಯಾಜಕಾಚೆ ಕಾಮ್ ಕರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:8
16 ತಿಳಿವುಗಳ ಹೋಲಿಕೆ  

ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಆರೋನ್ಯರು ಈ ವರ್ಗಕ್ರಮದಲ್ಲಿ ಸರ್ವೇಶ್ವರನ ಆಲಯಕ್ಕೆ ಬಂದು, ಲೇವಿಯರ ಮೂಲ ಪುರುಷನಾದ ಆರೋನನ ಮುಖಾಂತರ ಇಸ್ರಯೇಲ್ ದೇವರಾದ ಸರ್ವೇಶ್ವರ ನಿಯಮಿಸಿದ ಸೇವೆಯನ್ನು ನಡೆಸಬೇಕಾಗಿತ್ತು.


ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.


ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್‍. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.


ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು.


ಇದಲ್ಲದೆ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದ ಆರೋನನ ಸಂತಾನದ ಯಾಜಕರಿಗೆ ಪಾಲುಕೊಡುತ್ತಿದ್ದರು. ಯಾಜಕ ಸಂತಾನದ ಎಲ್ಲ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರಿಸಲಾದ ಪುರುಷರಿದ್ದರು.


ಲೇವಿಯರು ಸರ್ವೇಶ್ವರನಿಗೆ ಯಾಜಕ ಸೇವೆಮಾಡದಂತೆ ಯಾರೊಬ್ಬಾಮನು ಮತ್ತು ಅವನ ಮಕ್ಕಳು ಅವರನ್ನು ಬಹಿಷ್ಕರಿಸಿ ಇದ್ದರು.


ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.”


ಅಲ್ಲದೆ ಆರೋನನು ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.


ನಾನು ದೇವದರ್ಶನದ ಗುಡಾರವನ್ನು ಮತ್ತು ಬಲಿಪೀಠವನ್ನು ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು. ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು.


ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕ ಸೇವೆಗೆ ಸೇರಿಸು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತ ನಿಯಮವಾಗಿ ಪ್ರಾಪ್ತಿಸುವುದು.


“ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗಿ ಸೇವೆ ಸಲ್ಲಿಸುವಂತೆ ನೀನು ಅವರನ್ನು ಹೀಗೆ ಪ್ರತಿಷ್ಠಿಸು: ಕಳಂಕರಹಿತವಾದ ಒಂದು ಹೋರಿಕರುವನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದುದರಿಂದ ಎಲ್ಲಾಜಾರ್ ಈತಾಮಾರರು ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.


ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು