ಲೂಕ 1:9 - ಕನ್ನಡ ಸತ್ಯವೇದವು C.L. Bible (BSI)9 ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವದು ಯಾಜಕರ ಮರ್ಯಾದೆಯ ಪ್ರಕಾರ ಅವನ ಪಾಲಿಗೆ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಯಾಜಕಾಂಚ್ಯಾ ಪದ್ದತಿ ಸರ್ಕೆ ದೆವಾಚ್ಯಾ ಗುಡಿತ್ ಧುಪ್ ಘಾಲುಕ್ ಮನುನ್ ಜೆಕರಿಯಾಕ್ ಚಿಟಿಯಾ ಘಾಲುನ್ ಎಚುನ್ ಕಾಡಲ್ಲ್ಯಾನಿ. ಅಧ್ಯಾಯವನ್ನು ನೋಡಿ |
ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು.