Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:1 - ಕನ್ನಡ ಸತ್ಯವೇದವು C.L. Bible (BSI)

1 ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಸ್ವಾವಿುಯು ಇನ್ನೂ ಎಪ್ಪತ್ತು ಮಂದಿಯನ್ನು ನೇವಿುಸಿ ಅವರನ್ನು ಇಬ್ಬಿಬ್ಬರಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಾದನಂತರ, ಯೇಸು ಇನೂ ಎಪ್ಪತ್ತೆರಡು ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಹೊಲ್ಲ್ಯಾ ಮಾನಾ, ಜೆಜುನ್ ಅನಿ ಸತ್ತರಾರ್ ದೊನ್ ಜಾನಾಕ್ನಿ ಎಚುನ್ ಘೆಟ್ಲ್ಯಾನ್, ಅನಿ ಅಪ್ನಿ ಖೈ-ಖೈ ಜಾವ್ಚೆ ಮನುನ್ ಹೊತ್ತೆ, ಥೈ-ಥೈ ದೊಗ್ಯಾ-ದೊಗ್ಯಾಕ್ನಿ ವಾಂಗಡ್ ಕರುನ್ ಅಪ್ನಾಚ್ಯಾಕಿ ಫಿಡೆಚ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:1
14 ತಿಳಿವುಗಳ ಹೋಲಿಕೆ  

ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು.


ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು