ಲೂಕ 10:13 - ಕನ್ನಡ ಸತ್ಯವೇದವು C.L. Bible (BSI)13 “ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ ಕೂತುಕೊಂಡು ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಅದ್ಭುತಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 “ಖೊರಾಜಿನಾ! ಬೆತ್ಸಾಯಿದಾ! ತುಜಿ ಗತ್ ಕಾಯ್ ಸಾಂಗು, ತುಮ್ಚ್ಯಾ ಮದ್ದಿ ಕರಲ್ಲಿ ಮೊಟಿ-ಮೊಟಿ ಕಾಮಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್, ಥೈತ್ಲಿ ಲೊಕಾ ಅಪ್ನಾಚ್ಯಾ ಪಾಪಾನಿತ್ಲಾ ಅಮಿ ಭಾಯ್ರ್ ಯೆಲಾಂವ್ ಮನುನ್ ದಾಕ್ವುಕ್, ಕನ್ನಾಕಿಚ್ ಖಾಲ್ತಿ ಬಸುನ್, ಗೊನಿ ಚಿಲಾ ಆಂಗಾರ್ ಘಾಲುನ್ ಘೆಯ್ ಹೊತ್ತಿ, ಅನಿ ಆಂಗಾರ್ ರಕ್ಕಾ ಘಾಲುನ್ ಘೆಯ್ ಹೊತ್ತಿ, ಕಾಯ್ಕಿ! ಅಧ್ಯಾಯವನ್ನು ನೋಡಿ |