ಲೂಕ 10:16 - ಕನ್ನಡ ಸತ್ಯವೇದವು C.L. Bible (BSI)16 ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅನಿ ಅಪ್ನಾಚ್ಯಾ ಶಿಸಾಕ್ನಿ “ಜೆ ಕೊನ್ ತುಮ್ಕಾ ಆಯಿಕ್ತಾ, ತೊ ಮಾಕಾ ಆಯಿಕ್ತಾ; ಕೊನ್ ತುಮ್ಕಾ ಮರ್‍ಯಾದ್ ದಿ ನಾ, ತೊ ಮಾಕಾ ಮರ್‍ಯಾದ್ ದಿ ನಾ; ಅನಿ ಕೊನ್ ಮಾಕಾ ಮರ್‍ಯಾದ್ ದಿ ನಾ, ತೊ ಮಾಕಾ ಧಾಡಲ್ಲ್ಯಾಕ್ ಮರ್‍ಯಾದ್ ದಿ ನಾ”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.