Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:18 - ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ಅವರಿಗೆ - ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಅವರಿಗೆ, “ಸೈತಾನನು ಮಿಂಚಿನೋಪಾದಿಯಲ್ಲಿ ಆಕಾಶದಿಂದ ಕೆಳಗೆ ಬೀಳುವುದನ್ನು ನಾನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತನ್ನಾ ಜೆಜುನ್ ತೆಂಕಾ “ಮಿಂಚಾ ಸರ್ಕೆ ಸೈತಾನ್ ಸರ್‍ಗಾ ವೈನಾ ಖಾಲ್ತಿ ಪಡಲ್ಲೆ ಮಿಯಾ ಬಗಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:18
9 ತಿಳಿವುಗಳ ಹೋಲಿಕೆ  

ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?


ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.


ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು