Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:19 - ಕನ್ನಡ ಸತ್ಯವೇದವು C.L. Bible (BSI)

19 ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಆಯ್ಕಾ! ಮಿಯಾ ತುಮ್ಕಾ ಸಗ್ಳೊ ಅದಿಕಾರ್ ದಿಲಾ, ತಸೆಮನುನ್ ತುಮಿ ಸಾಪಾಂಚ್ಯಾ ವರ್‍ತಿ, ಅನಿ ಇಂಚ್ವಾಂಚ್ಯಾ ವರ್‍ತಿ, ಅನಿ ದುಸ್ಮಾನಾಚ್ಯಾ ವರ್‍ತಿ ಜಿಕ್ತ್ಯಾಶಿ, ಅನಿ ತುಮ್ಕಾ ಕಾಯ್ಬಿ ಅಪಾಯ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:19
12 ತಿಳಿವುಗಳ ಹೋಲಿಕೆ  

ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II


ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಆದರೆ ಪೌಲನು ಹಾವನ್ನು ಬೆಂಕಿಗೆ ಒದರಿಬಿಟ್ಟನು. ಅವನಿಗೆ ಯಾವ ಅಪಾಯವೂ ಆಗಲಿಲ್ಲ.


ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈಹಾಕುವುದು ಮೊಲೆಬಿಟ್ಟ ಮಗು ಹಾವಿನ ಬಿಲದ ಒಳಗೆ.


ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು", ಎಂದು ಉತ್ತರ ಕೊಟ್ಟರು.


ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುತ್ತಾನೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು