ಲೂಕ 10:2 - ಕನ್ನಡ ಸತ್ಯವೇದವು C.L. Bible (BSI)2 ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತಾನು ಹೋಗಬೇಕೆಂದಿದ್ದ ಪ್ರತಿಯೊಂದೂರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸು ಅವರಿಗೆ, “ಬೆಳೆಯೋ ಬಹಳವಾಗಿದೆ, ಕೆಲಸದವರೋ ಕೆಲವರು. ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆನಿ ತೆಂಕಾ, “ಭರ್‍ಪುರ್ ಪಿಕ್ಕ್ ಯೆಲ್ಲೆ ಹಾಯ್, ಖರೆ ತೆ ಗೊಳಾ ಕರುಕ್ ಕಾಮ್ಗಾರಿ ಲೈ ಕಮಿ ಹಾತ್.ಪಿಕ್ಕಾಚ್ಯಾ ಯಜಮಾನಾಕ್ಡೆ ತೆಚೆ ಪಿಕ್ಕ್ ಗೊಳಾ ಕರುಕ್ ಕಾಮ್ಗಾರಿ ಧಾಡುನ್ ದಿ ಮನುನ್ ಮಾಗ್ನಿ ಕರಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).
ನಮ್ಮ ಅತಿಪ್ರಿಯನೂ ಸಹೋದ್ಯೋಗಿಯೂ ಆದ ಫಿಲೆಮೋನನಿಗೂ ನಿನ್ನ ಮನೆಯಲ್ಲಿ ಸಭೆಸೇರುವ ಸಹೋದರರಿಗೂ ಹಾಗು ನಮ್ಮ ಸಹೋದರಿ ಅಪ್ಪಿಯ ಮತ್ತು ಸಹಸೈನಿಕ ಅರ್ಖಿಪ್ಪನಿಗೂ - ಕ್ರಿಸ್ತಯೇಸುವಿಗೋಸ್ಕರ ಸೆರೆಯಾಳಾಗಿರುವ ಪೌಲನೂ ಮತ್ತು ನಮ್ಮ ಸಹೋದರ ತಿಮೊಥೇಯನೂ ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಮತ್ತು ಒಡೆಯರಾದ ಯೇಸುಕ್ರಿಸ್ತರು ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ!