Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:20 - ಕನ್ನಡ ಸತ್ಯವೇದವು C.L. Bible (BSI)

20 ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಗಿರೆ ತುಮಿ ಸಾಂಗಟಲ್ಲೆ ಆಯಿಕ್ತ್ಯಾತ್ ಮನುನ್ ಕುಶಿ ಹೊವ್‍ನಕಾಶಿ; ಸರ್‍ಗಾತ್ ತುಮ್ಚೆ ನಾವ್ ಲಿವಲ್ಲೆ ಹಾಯ್ ಮನುನ್ ಕುಶಿ ಹೊವಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:20
19 ತಿಳಿವುಗಳ ಹೋಲಿಕೆ  

ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು