Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:22 - ಕನ್ನಡ ಸತ್ಯವೇದವು C.L. Bible (BSI)

22 ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 “ಮಾಜ್ಯಾ ಬಾಬಾನ್ ಮಾಕಾ ಸಗ್ಳೆ ದಿಲ್ಯಾನಾಯ್,ಬಾಬಾಕ್ ಸೊಡುನ್ ಕೊನಾಕ್ಬಿ ಲೆಕ್ ಕೊನ್ ಮನುನ್ ಗೊತ್ತ್ ನಾ, ಬಾಬಾ ಕೊನ್ ಮನುನ್ ಲೆಕಾಕ್ ಅನಿ ತೆನಿ ಎಚುನ್ ಕಾಡುನ್, ಹೆಚ್ಯಾ ವಿಶಯಾತ್ ಸಾಂಗಲ್ಲ್ಯಾಕ್ನಿ ಸೊಡುನ್ ಕೊನಾಕ್ಬಿ ಗೊತ್ತ್ ನಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:22
20 ತಿಳಿವುಗಳ ಹೋಲಿಕೆ  

“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಆತನಿಗೆ ನೀನೆಲ್ಲವನು ಅಧೀನವಾಗಿಸಿದೆ.” ಹೀಗೆ ದೇವರು ಎಲ್ಲವನ್ನು ಆತನಿಗೆ ಅಧೀನಪಡಿಸಿರುವುದರಿಂದ ಆತನಿಗೆ ಅಧೀನವಲ್ಲದ್ದು ಏನೂ ಇಲ್ಲವೆಂದಾಯಿತು. ಆದರೂ ಸದ್ಯಕ್ಕೆ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಕಾಣುತ್ತಿಲ್ಲ.


ಅಂತ್ಯ ಬರುವುದು ಅನಂತರವೇ. ಆಗ ಯೇಸು ಎಲ್ಲಾ ಆಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.


ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ.


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು