Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:24 - ಕನ್ನಡ ಸತ್ಯವೇದವು C.L. Bible (BSI)

24 ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಿಲ್ಲ ಎಂಬದಾಗಿ ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅನೇಕ ಪ್ರವಾದಿಗಳೂ ಅರಸರೂ ಈಗ ನೀವು ನೋಡುತ್ತಿರುವ ಈ ಸಂಗತಿಗಳನ್ನು ನೋಡಬೇಕೆಂದು ಮತ್ತು ಈಗ ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಅನೇಕ ಪ್ರವಾದಿಗಳು ಮತ್ತು ಅರಸರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಶ್ಯಾಕ್ ಮಟ್ಲ್ಯಾರ್, ಮಿಯಾ ತುಮ್ಕಾ ಸಾಂಗ್ತಾ, ಲೈ ಪ್ರವಾದ್ಯಾಕ್ನಿ, ಅನಿ ರಾಜಾಕ್ನಿ, ತುಮಿ ಬಗಲ್ಲೆ ಬಗುಕ್, ಅನಿ ತುಮಿ ಆಯ್ಕಲ್ಲೆ ಆಯ್ಕುಕ್, ಮನ್ ಹೊತ್ತೊ, ಖರೆ ತೆಂಕಾ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:24
7 ತಿಳಿವುಗಳ ಹೋಲಿಕೆ  

ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರಕೊಟ್ಟರು.


ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ.


“ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ.


ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು.


ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು