Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:28 - ಕನ್ನಡ ಸತ್ಯವೇದವು C.L. Bible (BSI)

28 ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನು ಅವನಿಗೆ - ನೀನು ಸರಿಯಾಗಿ ಉತ್ತರಕೊಟ್ಟಿ; ಇದರಂತೆ ಮಾಡು, ಮಾಡಿದರೆ ಜೀವಿಸುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು, “ನಿನ್ನ ಉತ್ತರ ಸರಿಯಾಗಿದೆ. ನೀನು ಹಾಗೆಯೇ ಮಾಡು, ಆಗ ನಿನಗೆ ನಿತ್ಯಜೀವ ದೊರೆಯುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಯೇಸು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟೆ, ಅದರಂತೆಯೇ ಮಾಡು, ಆಗ ನೀನು ಬದುಕುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ಜೆಜುನ್ ತೆಕಾ “ಸಮಾ ಸಾಂಗ್ಲೆ” ತಿಯಾ “ಹೆ ಕರ್ ಅನಿ ತುಕಾ ನಿರಂತರ್ ಝಿತ್ತೊ ರ್‍ಹಾತಲೆ ಜಿವನ್ ಗಾವ್ತಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:28
14 ತಿಳಿವುಗಳ ಹೋಲಿಕೆ  

ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.


ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ.


ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.


ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.


“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಈ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ನಮಗೆ ಅಪ್ಪಣೆಮಾಡಿದ್ದಾರೆ. ಸದಾ ಶುಭವುಂಟಾಗಬೇಕಾದರೆ, ಅವರು ಎಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡಬೇಕಾದರೆ ನಾವು ನಮ್ಮ ದೇವರಾದ ಸರ್ವೇಶ್ವರನಿಗೆ ಭಯಭಕ್ತಿಯುಳ್ಳವರಾಗಿರಬೇಕು.


ದೈವಾಜ್ಞೆಯನ್ನು ಪಾಲಿಸುವವನು ತನ್ನನ್ನೇ ಕಾಪಾಡಿಕೊಳ್ಳುವನು; ದೈವವಾರ್ತೆಯ ಬಗ್ಗೆ ಅಜಾಗ್ರತನಾಗಿರುವವನು ಸಾಯುವನು.


ನಾನಾದರೋ ಸತ್ತೆನು. ಜೀವದಾಯಕವಾಗಬೇಕಿದ್ದ ಆಜ್ಞೆಯೇ ನನಗೆ ಮೃತ್ಯುಕಾರಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು