Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:3 - ಕನ್ನಡ ಸತ್ಯವೇದವು C.L. Bible (BSI)

3 ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೋಗಿರಿ; ತೋಳಗಳ ನಡುವೆ ಕುರಿಮರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಈಗ ನೀವು ಹೋಗಬಹುದು. ಆದರೆ ನನ್ನ ಈ ಮಾತನ್ನು ಕೇಳಿರಿ! ತೋಳಗಳ ಮಧ್ಯೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನು ಕಳುಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೋಗಿರಿ! ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 “ಮಾನಾ ಜಾಂವಾ! ಝುಲ್ ಕುತ್ರ್ಯಾಂಚ್ಯಾ ಮದ್ದಿ, ಬಕ್ರ್ಯಾಕ್ನಿ ಧಾಡ್ಲ್ಯಾ ಸರ್ಕೆ ಮಿಯಾ ತುಮ್ಕಾ ಧಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:3
14 ತಿಳಿವುಗಳ ಹೋಲಿಕೆ  

“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ.


ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು