Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:30 - ಕನ್ನಡ ಸತ್ಯವೇದವು C.L. Bible (BSI)

30 ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ಯೆರೂಸಲೇವಿುನಿಂದ ಘಟ್ಟಾ ಇಳಿದು ಯೆರಿಕೋವಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯೇಸು: “ಒಬ್ಬ ಮನುಷ್ಯನು ಯೆರೂಸಲೇಮಿನಿಂದ ಯೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನ ವಸ್ತ್ರಗಳನ್ನು ಕಿತ್ತುಕೊಂಡು, ಅವನನ್ನು ಗಾಯಮಾಡಿ, ಅರೆಜೀವ ಮಾಡಿಬಿಟ್ಟು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ಜೆಜುನ್ “ಎಕ್ ಮಾನುಸ್ ಹೊತ್ತೊ, ತೊ ಜೆರುಜಲೆಮಾಕ್ನಾ, ಜೆರಿಕೊಕ್ ಜಾವ್‍ಲಾಗಲ್ಲೊ, ತನ್ನಾ ಚೊರಾನಿ ತೆಕಾ ಧರ್‍ಲ್ಯಾನಿ,ಅನಿ ತೆಚ್ಯೆಕ್ಡೆ ಹೊತ್ತೆ ಸಗ್ಳೆ ಕಾಡುನ್ ಘೆಟ್ಲ್ಯಾನಿ, ಅನಿ ತೆಕಾ ಮಾರುನ್ ಅರ್‍ದೊ ಜಿವ್ ಕರ್‍ಲ್ಯಾನಿ”,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:30
7 ತಿಳಿವುಗಳ ಹೋಲಿಕೆ  

ನಾನಿರುವೆ ಸಮಾಧಿ ಸೇರಲಿರುವವರಂತೆ I ಇರುವೆ ಶಕ್ತಿಯಿಲ್ಲದ ನರಮಾನವರಂತೆ II


ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು.


ಇದನ್ನೆಲ್ಲಾ ಹೇಳಿ ಆದಮೇಲೆ ಯೇಸುಸ್ವಾಮಿ ಅವರೆಲ್ಲರಿಗಿಂತ ಮುಂದಾಗಿ ನಡೆದು ಜೆರುಸಲೇಮಿನತ್ತ ತೆರಳಿದರು.


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿ: “ಬರಲಿವೆ ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ನರಳಾಡುವರು ಗಾಯಗೊಂಡವರು.


‘ಅಮ್ಮಾ ತಿನ್ನಲಿಕ್ಕಿಲ್ಲವೆ? ಕುಡಿಯಲಿಕ್ಕಿಲ್ಲವೆ? ಎನ್ನುತ ಮಕ್ಕಳು ಮೂರ್ಛೆಗೊಂಡಿವೆ. ಗಾಯಗೊಂಡವರಂತೆ ನಗರದ ಚೌಕಗಳೊಳು ಪ್ರಾಣಬಿಡುತ್ತಿವೆಯಲ್ಲಾ ತಾಯಿಯ ಎದೆಯ ಮೇಲೆ ಆ ಹಸುಳೆಗಳು.


ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು