Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:39 - ಕನ್ನಡ ಸತ್ಯವೇದವು C.L. Bible (BSI)

39 ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆಕೆಗೆ ಮರಿಯಳೆಂಬ ತಂಗಿ ಇದ್ದಳು. ಮರಿಯಳು ಯೇಸುವಿನ ಪಾದಗಳ ಬಳಿ ಕುಳಿತುಕೊಂಡು ಆತನ ಉಪದೇಶವನ್ನು ಕೇಳುತ್ತಿದ್ದಳು. ಆದರೆ ಆಕೆಯ ಸಹೋದರಿಯಾದ ಮಾರ್ಥಳು ಅತಿಥಿಸತ್ಕಾರ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತಿಕಾ ಮರಿ ಮನ್ತಲಿ ಭೆನ್ ಹೊತ್ತಿ, ತಿ ಜೆಜುಚ್ಯಾ ಇದ್ರಾಕ್ ಬಸುನ್, ತೆನಿ ಸಿಕ್ವುತಲೆ ಆಯ್ಕುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:39
11 ತಿಳಿವುಗಳ ಹೋಲಿಕೆ  

ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.


ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ, ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (


ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು