Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:41 - ಕನ್ನಡ ಸತ್ಯವೇದವು C.L. Bible (BSI)

41 ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದರೆ ಪ್ರಭುವು ಅವಳಿಗೆ, “ಮಾರ್ಥಾ, ಮಾರ್ಥಾ, ನೀನು ಅನೇಕ ಕೆಲಸಗಳ ಬಗ್ಗೆ ಚಿಂತಿಸುತ್ತಾ ಗಲಿಬಿಲಿಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಖರೆ ಜೆಜುನ್ ತಿಕಾ “ಮಾರ್ಥಾ! ತಿಯಾ ಹೆ ಕಾಮ್, ತೆ ಕಾಮ್, ಮನುನ್ ಲೈ ಯವ್ಜುಕ್ ಲಾಗ್ಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:41
13 ತಿಳಿವುಗಳ ಹೋಲಿಕೆ  

ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ.


ಮಾತು ಹೆಚ್ಚಿದಷ್ಟೂ ಪರಿಣಾಮ ಕಡಿಮೆ. ಅದರಿಂದ ಮನುಷ್ಯನಿಗಾಗುವ ಪ್ರಯೋಜನವಾದರೂ ಏನು?


ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.


ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು.


ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (


ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು.


ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು. ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಲಾಸರನೂ ಒಬ್ಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು