Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:6 - ಕನ್ನಡ ಸತ್ಯವೇದವು C.L. Bible (BSI)

6 ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಶೀರ್ವಾದಪಾತ್ರನು ಅಲ್ಲಿ ಇದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನಿಲ್ಲುವದು; ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಮನೆಯಲ್ಲಿ ಶಾಂತಸ್ವಭಾವದ ಮನುಷ್ಯನಿದ್ದರೆ, ನಿಮ್ಮ ಆಶೀರ್ವಾದ ಅವನಿಗೆ ದೊರೆಯುವುದು. ಅವನು ಶಾಂತಸ್ವಭಾವದವನಾಗಿಲ್ಲದಿದ್ದರೆ ನಿಮ್ಮ ಆಶೀರ್ವಾದ ನಿಮಗೇ ಹಿಂತಿರುಗಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ ಸಮಾಧಾನದ ಮನುಷ್ಯನು ಇದ್ದರೆ, ನಿಮ್ಮ ಸಮಾಧಾನವು ಅವನ ಮೇಲೆ ಇರುವುದು; ಇಲ್ಲದಿದ್ದರೆ, ಅದು ನಿಮಗೇ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜರ್ ಸಮಾದಾನಾಚೊ, ಪ್ರೆಮಾಚೊ ಮಾನುಸ್ ಥೈ ರ್‍ಹಾಲ್ಯಾರ್, ತುಮಿ ಸಾಂಗಲ್ಲೆ ಸಮಾದಾನ್ ತೆಚ್ಯಾ ವಾಂಗ್ಡಾ ರಾವ್ಕ್ ಸೊಡಾ; ನಸ್ಲ್ಯಾರ್, ತುಮ್ಚೆ ಸಮಾದಾನ್ ಫಾಟಿ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:6
11 ತಿಳಿವುಗಳ ಹೋಲಿಕೆ  

ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ದೇವರೊಡನೆ ಸತ್ಸಂಬಂಧವೆಂಬ ಫಲವನ್ನು ಕೊಯ್ಯುತ್ತಾರೆ.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಅವರು ಅಸ್ವಸ್ಥರಾಗಿರಲು ಶೋಕವಸ್ತ್ರಧಾರಿಯಾದೆ I ತಲೆಬಾಗಿ ಜಪಿಸಿದೆ, ನಾ ಮನನೊಂದು ಉಪವಾಸವಿದ್ದೆ II


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ.


ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ.


ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು