Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:1 - ಕನ್ನಡ ಸತ್ಯವೇದವು C.L. Bible (BSI)

1 ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು. “ಪ್ರಭುವೇ, ಯೊವಾನ್ನನು ತನ್ನ ಶಿಷ್ಯರಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ,” ಎಂದನು. ಅದಕ್ಕೆ ಯೇಸು ಇಂತೆಂದರು, “ನೀವು ಹೀಗೆ ಪ್ರಾರ್ಥನೆಮಾಡಬೇಕು: ತಂದೆಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - ಸ್ವಾಮೀ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆಮಾಡುವದನ್ನು ಕಲಿಸು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದ ಮೇಲೆ, ಅವರ ಶಿಷ್ಯರಲ್ಲಿ ಒಬ್ಬನು ಅವರಿಗೆ, “ಕರ್ತದೇವರೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆಮಾಡುವುದಕ್ಕೆ ಕಲಿಸಿರಿ,” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ದಿಸ್ ಜೆಜು ಎಕ್ ಜಾಗ್ಯಾರ್ ಮಾಗ್ನಿ ಕರುಕ್ ಲಾಗಲ್ಲೊ. ತೆಚಿ ಮಾಗ್ನಿ ಕರುನ್ ಹೊಲ್ಲ್ಯಾ ಮಾನಾ, ತೆಚ್ಯಾ ಶಿಸಾನಿತ್ಲೊ ಎಕ್ಲೊ “ಗುರುಜಿ, ಜುವಾಂವಾಕ್ ಅಪ್ನಾಚ್ಯಾ ಶಿಸಾಕ್ನಿ ಶಿಕ್ವಲ್ಲ್ಯಾ ಸರ್ಕೆ ಅಮ್ಕಾಬಿ ಮಾಗ್ನಿ ಕರುಕ್ ಶಿಕ್ವು”, ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:1
14 ತಿಳಿವುಗಳ ಹೋಲಿಕೆ  

ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು.


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು