ಲೂಕ 11:13 - ಕನ್ನಡ ಸತ್ಯವೇದವು C.L. Bible (BSI)13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಬುರ್ಶೆ ತುಮಿ, ತುಮ್ಕಾ ಗೊತ್ತ್ ಹಾಯ್,ಪೊರಾಕ್ನಿ ದಿವ್ಕ್ ಖಲೆ ಬರೆ ಮನುನ್ ಅನಿ ಖಲೆ ಪೊರಾಕ್ನಿ ದಿವ್ಚೆ ಮನುನ್, ತರ್, ಸರ್‍ಗಾ ವೈಲೊ ಪವಿತ್ರ್ ಬಾಬಾ, ಅಪ್ನಾಕ್ಡೆ ಮಾಗ್ತಲ್ಯಾಕ್ನಿ ಕವ್ಡ್ಯಾ ಮಾಪಾನ್ ಅಪ್ನಾಚೊ ಪವಿತ್ರ್ ಆತ್ಮೊ ದಿಯ್ಲ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |