Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:15 - ಕನ್ನಡ ಸತ್ಯವೇದವು C.L. Bible (BSI)

15 ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಅವರಲ್ಲಿ ಕೆಲವರು - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಕೆಲವರು, “ದೆವ್ವದಿಂದ ಪೀಡಿತರಾಗಿರುವವರನ್ನು ಇವನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವರಲ್ಲಿ ಕೆಲವರು, “ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ಎಕ್ ಉಲ್ಲ್ಯಾಸ್ಯಾ ಲೊಕಾನಿ, “ಬೆಎಲ್ಜೆಬುಲ್ ಮನ್ತಲೊ ಗಿರ್‍ಯಾಂಚೊ ಮುಖಂಡ್ ಜೆಜುಕ್ ಗಿರೆ ಭಾಯ್ರ್ ಕಾಡುಕ್ ತಾಕತ್ ದಿತಾ”, ಮನುನ್ ಸಾಂಗುಕ್ ಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:15
11 ತಿಳಿವುಗಳ ಹೋಲಿಕೆ  

ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು.


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿರಬೇಕು; ನಿನ್ನನ್ನು ಕೊಲ್ಲಲು ಹವಣಿಸುತ್ತಿರುವವರಾದರು ಯಾರು?” ಎಂದರು.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು