Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:20 - ಕನ್ನಡ ಸತ್ಯವೇದವು C.L. Bible (BSI)

20 ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನಾನು ದೆವ್ವಗಳನ್ನು ದೇವರ ಬಲದಿಂದ ಹೊರಡಿಸುವುದಾದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ದೇವರ ಬಲದಿಂದಲೇ ದೆವ್ವಗಳನ್ನು ಓಡಿಸುವುದಾದರೆ, ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 “ಮಿಯಾ ದೆವಾಚ್ಯಾ ಬಳಾನ್ ಗಿರೆ ಕಾಡ್ತಾ, ಅನಿ ಹೆ, ದೆವಾಚೆ ರಾಜ್ ತುಮ್ಚ್ಯಾ ಮದ್ದಿ ಯೆವ್ನ್ ಹೊಲಾ ಮನುನ್ ತುಮ್ಕಾ ದಾಕ್ವುನ್ ದಿತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:20
11 ತಿಳಿವುಗಳ ಹೋಲಿಕೆ  

ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ನಾನು ದೇವರ ಆತ್ಮದಿಂದ ದೆವ್ವಗಳನ್ನು ಬಿಡಿಸುವುದಾದರೆ, ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ.


ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.


ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


“ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯೆಲ್ಲ ಸುರಕ್ಷಿತವಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು