Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:24 - ಕನ್ನಡ ಸತ್ಯವೇದವು C.L. Bible (BSI)

24 ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, ‘ನಾನು ಬಿಟ್ಟುಬಂದ ನನ್ನ ಮನೆಗೇ ಹಿಂದಿರುಗುತ್ತೇನೆ’ ಎಂದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ; ವಿಶ್ರಾಂತಿ ಸಿಕ್ಕದ ಕಾರಣ ಅದು - ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ ಅಂದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ದೆವ್ವವು ಒಬ್ಬ ವ್ಯಕ್ತಿಯಿಂದ ಹೊರಗೆ ಬಂದ ಮೇಲೆ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಅಲೆದಾಡುತ್ತದೆ. ಆದರೆ ವಿಶ್ರಮಿಸಿಕೊಳ್ಳಲು ಅದಕ್ಕೆ ಸ್ಥಳ ದೊರೆಯುವುದಿಲ್ಲ. ಆದ್ದರಿಂದ ‘ನಾನು ಬಿಟ್ಟುಬಂದ ಮನೆಗೆ (ವ್ಯಕ್ತಿ) ಹಿಂತಿರುಗುವೆನು’ ಎಂದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ, ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ ಅದು, ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಎಕ್ ಮಾನ್ಸಾಕ್ನಾ ಗಿರೊ ಭಾಯ್ರ್ ಗೆಲ್ಲ್ಯಾ ತನ್ನಾ, ತೊ ಸಗ್ಳೆಕ್ಡೆ ಫಿರುನ್, ಅಪ್ನಾಕ್ ರ್‍ಹಾವ್ಕ್ ಜಾಗೊ ಗಾವ್ತಾ ಕಾಯ್ ಮನುನ್ ಬಗ್ತಾ. ತೆಕಾ ಖೈಬಿ ಜಾಗೊ ಗಾವಿನಸ್ಲ್ಯಾರ್, ತೆ ಅಪ್ನಾಕುಚ್ ಮಿಯಾ ಅನಿ ಪರ್ತುನ್ ಮಾಜ್ಯಾ ಘರಾಕ್ ಜಾತಾ” ಮನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:24
18 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


“ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.


ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.


ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು.


“ದುಷ್ಟರಿಗಿಲ್ಲ ಶಾಂತಿಸಮಾಧಾನ” ಇದು ಸರ್ವೇಶ್ವರ ಸ್ವಾಮಿಯ ವಚನ.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.


ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.


ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು