Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:31 - ಕನ್ನಡ ಸತ್ಯವೇದವು C.L. Bible (BSI)

31 “ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಝಡ್ತಿಚ್ಯಾ ದಿಸಿ, ಶೆಬಾ ಮನ್ತಲ್ಯಾ ಗಾಂವಾಚಿ ರಾನಿ ಸೈತ್, ಹ್ಯಾ ಅತ್ತಾಚ್ಯಾ ಕಾಲಾಚ್ಯಾ ಲೊಕಾಕ್ನಿ ಚುಕಿದಾರ್ ಮನುನ್ ದಾಕ್ವುನ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಸೊಲೊಮೊನ್ ರಾಜಾಚ್ಯಾ ಬುದ್ವಂತ್ಕಿಚ್ಯಾ ಗೊಸ್ಟಿಯಾ ಆಯ್ಕುಕ್ ತಿ, ಅಪ್ನಾಚ್ಯಾ ದೆಸಾತ್ನಾ ಫಿರು-ಫಿರುನ್ಗೆತ್ ಯೆಲ್ಲಿ. ಅನಿ ಮಿಯಾ ತುಮ್ಕಾ ಸಾಂಗ್ತಾ, ಹಿತ್ತೆ ಕಾಯ್ಕಿ ಸಾಲ್ಮಾವಾಚ್ಯಾನ್ಕಿ ಮೊಟೆ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:31
11 ತಿಳಿವುಗಳ ಹೋಲಿಕೆ  

ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.


ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು