Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:32 - ಕನ್ನಡ ಸತ್ಯವೇದವು C.L. Bible (BSI)

32 ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ನ್ಯಾಯತೀರ್ಪಿನ ದಿನದಲ್ಲಿ ನಿನೆವೆ ಪಟ್ಟಣದವರು ಈ ಸಂತತಿಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ತೋರಿಸುವರು. ಏಕೆಂದರೆ ಅವರು ಪ್ರವಾದಿಯಾದ ಯೋನನ ಬೋಧನೆಯನ್ನು ಕೇಳಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ನಾನು ಪ್ರವಾದಿ ಯೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಝಡ್ತಿಚ್ಯಾ ದಿಸಿ, ನಿನಿವೆಚಿ ಲೊಕಾ ಇಬೆ ರ್‍ಹಾವ್ನ್ ತುಮ್ಚಿ ಚುಕಾ ದಾಕ್ವುನ್ ದಿತ್ಯಾತ್. ಕಶ್ಯಾಕ್ ಮಟ್ಲ್ಯಾರ್, ಜೊನಾ ಪ್ರವಾದ್ಯಾನ್ ಸಾಂಗಲ್ಲೆ ಆಯ್ಕಲ್ಲೆಚ್, ತೆನಿ ದೆವಾಕ್ಡೆ ಫಾಟಿ ಪರತ್ಲ್ಯಾನಿ; ಅನಿ ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಹಿತ್ತೆ ಜೊನಾ ಪ್ರವಾದ್ಯಾಚ್ಯಾನ್ಕಿ ಮೊಟೊ ಹಿತ್ತೆ ಹಾಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:32
9 ತಿಳಿವುಗಳ ಹೋಲಿಕೆ  

ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


“ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು.


ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.


ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು