Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:36 - ಕನ್ನಡ ಸತ್ಯವೇದವು C.L. Bible (BSI)

36 ದೇಹದ ಯಾವುದೊಂದು ಭಾಗದಲ್ಲೂ ಕತ್ತಲೆಯಿಲ್ಲದೆ ದೇಹವೆಲ್ಲ ಕಾಂತಿಮಯವಾಗಿದ್ದರೆ, ದೀಪವು ತನ್ನ ಪ್ರಕಾಶದಿಂದ ನಿನ್ನನ್ನು ಬೆಳಗಿಸುವಂತೆ, ನಿನ್ನ ದೇಹದಾದ್ಯಂತವೂ ದೇದೀಪ್ಯಮಾನವಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಒಂದು ಭಾಗದಲ್ಲಿಯೂ ಕತ್ತಲಿಲ್ಲದ್ದಾಗಿದ್ದರೆ ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಕಾಲದಲ್ಲಿ ಹೇಗೋ ಹಾಗೆಯೇ ಅದು ಪೂರ್ಣವಾಗಿ ಬೆಳಕಾಗಿರುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಿನ್ನ ದೇಹವೆಲ್ಲಾ ಬೆಳಕಿನಿಂದ ತುಂಬಿದ್ದು ಯಾವ ಭಾಗದಲ್ಲಿಯೂ ಕತ್ತಲಿಲ್ಲದಿದ್ದರೆ ನೀನು ಪ್ರಜ್ವಲಿಸುವ ಬೆಳಕಿನಂತಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ದೇಹದ ಯಾವುದೊಂದು ಭಾಗದಲ್ಲಿಯೂ ಕತ್ತಲೆಯಾಗಿರದೆ, ನಿನ್ನ ದೇಹವೆಲ್ಲವೂ ಪೂರ್ಣವಾಗಿ ಬೆಳಕಾಗಿರುವುದಾದರೆ, ಪ್ರಕಾಶಮಾನವಾದ ದೀಪವು ನಿನಗೆ ಬೆಳಕುಕೊಡುವಂತೆ ಸಮಸ್ತವೂ ಬೆಳಕಾಗಿರುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಜರ್‌ತರ್ ತುಜೆ ಸಗ್ಳೆ ಆಗ್ ಉಜ್ವೊಡಾತ್ ಹಾಯ್; ತರ್, ತುಜ್ಯಾ ಆಂಗಾಚೊ ಖಲೊ ಭಾಗ್‍ಬಿ ಕಾಳ್ಕಾತ್ ನಾ ಮನುನ್ ಹೊಲೆ, ಕಶೆ ಎಕ್ ದಿವೊ ಪೆಟಲ್ಲ್ಯಾ ತನ್ನಾ ತುಮ್ಚೆ ವರ್‍ತಿ ಕಸೊ ಉಜ್ವೊಡ್ ಪಡ್ತಾ, ತಸೆ, ತುಮಿ ರ್‍ಹಾತ್ಯಾಶಿ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:36
22 ತಿಳಿವುಗಳ ಹೋಲಿಕೆ  

ಮನುಷ್ಯನ ಆತ್ಮ ಸರ್ವೇಶ್ವರನು ಕೊಟ್ಟ ದೀಪ; ಅಂತರಂಗವನ್ನೆಲ್ಲ ಶೋಧಿಸಬಲ್ಲದು ಅದರ ಪ್ರಕಾಶ.


ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.


ಆದುದರಿಂದ ನಿನ್ನೊಳಗಿರುವ ಬೆಳಕಿಗೆ ಕತ್ತಲೆ ಕವಿಯದಂತೆ ಎಚ್ಚರಿಕೆ ವಹಿಸು.


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಗಿಸಿದಾಗ, ಫರಿಸಾಯನೊಬ್ಬನು ಅವರನ್ನು ಊಟಕ್ಕೆ ಆಮಂತ್ರಿಸಿದನು. ಯೇಸು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು