Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:4 - ಕನ್ನಡ ಸತ್ಯವೇದವು C.L. Bible (BSI)

4 ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷವಿುಸುತ್ತೇವಾದ್ದರಿಂದ ನಮ್ಮ ಪಾಪಗಳನ್ನು ಕ್ಷವಿುಸು. ನಮ್ಮನ್ನು ಶೋಧನೆಯೊಳಗೆ ಸೇರಿಸಬೇಡ ಎಂದು ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವಂತೆ ನಮ್ಮಪಾಪಗಳನ್ನೂ ಕ್ಷಮಿಸು. ನಮ್ಮನ್ನು ಶೋಧನೆಗೆ ಒಳಪಡಿಸಬೇಡ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮಿ ದುಸ್ರ್ಯಾನಿ ಕರಲ್ಲ್ಯಾ ಚುಕಾ ಕಶೆ ಮಾಪ್ ಕರ್‍ತಾವ್, ತಸೆ ಅಮ್ಚ್ಯಾ ಚುಕಾ ಮಾಪ್ ಕರ್, ಅನಿ ಅಮ್ಕಾ ಲೈ ಕಟಿನ್ ಪರಿಕ್ಷಾತ್ನಿ ಘಾಲುನಕ್ಕೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:4
31 ತಿಳಿವುಗಳ ಹೋಲಿಕೆ  

ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.


ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.


“ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.


ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು.


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”


ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II


ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II


ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.


ಪರಲೋಕದಲ್ಲಿರುವ ನೀವು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪಿತೃಗಳಿಗೆ ನೀವು ಕೊಟ್ಟ ಈ ನಾಡಿಗೆ ಅವರನ್ನು ಮರಳಿಬರಮಾಡಿ.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಪುನಃ ಯೇಸುಸ್ವಾಮಿ ಶಿಷ್ಯರಿಗೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, ‘ಗೆಳೆಯಾ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.


ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು