Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:49 - ಕನ್ನಡ ಸತ್ಯವೇದವು C.L. Bible (BSI)

49 ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಹ್ಯಾ ಕಾರನಾಕ್ ಸಾಟ್ನಿ ದೆವಾಚಿ ಬುದ್ವಂತ್ಕಿ ಮನ್ತಾ ಮಿಯಾ ತೆಂಚೆಕ್ಡೆ ಪ್ರವಾದ್ಯಾಕ್ನಿ, ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಧಾಡುನ್ ದಿತಾ; ತ್ಯಾತುರ್‍ಲ್ಯಾ ಥೊಡ್ಯಾಕ್ನಿ ಜಿವಾನಿಚ್ ಮಾರ್‍ತ್ಯಾತ್, ಅನಿ ಉಲ್ಲ್ಯಾಕ್ನಿ ತರಾಸ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:49
27 ತಿಳಿವುಗಳ ಹೋಲಿಕೆ  

ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ನಿಮ್ಮ ಸಾಕ್ಷಿಯಾದ ಸ್ತೇಫನನ ಹತ್ಯೆ ನಡೆದಾಗ ನಾನೂ ಸಮ್ಮತಿಸಿ ಅಲ್ಲೇ ಇದ್ದೆ. ಅವನನ್ನು ಕೊಲೆಮಾಡುತ್ತಿದ್ದವರ ಬಟ್ಟೆಬರೆಗಳಿಗೆ ನಾನೇ ಕಾವಲು ನಿಂತೆ. ಇದೆಲ್ಲ ಅವರಿಗೆ ಚೆನ್ನಾಗಿ ಗೊತ್ತಿದೆ,’ ಎಂದೆ. ಅದಕ್ಕೆ ಪ್ರಭು,


ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು.


ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ.


ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು.


ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು