Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:52 - ಕನ್ನಡ ಸತ್ಯವೇದವು C.L. Bible (BSI)

52 ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಅಯ್ಯೋ ಧರ್ಮೋಪದೇಶಕರೇ, ಜ್ಞಾನಕ್ಕೆ ಸಾಧನವಾದ ಬೀಗದ ಕೈಯನ್ನು ತೆಗೆದುಬಿಟ್ಟಿರಿ. ನೀವೂ ಒಳಕ್ಕೆ ಹೋಗಲಿಲ್ಲ; ಒಳಕ್ಕೆ ಹೋಗುತ್ತಿರುವವರಿಗೂ ಅಡ್ಡಿಮಾಡಿದಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 “ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 “ಖಾಯ್ದೆ ಶಿಕ್ವುತಲ್ಯಾನು ತುಮ್ಚಿ ಗತ್ ಕಾಯ್ ಸಾಂಗು! ಬುದ್ವಂತ್ಕಿಚ್ಯಾ ಘರಾಚ್ಯಾ ದಾರಾಚಿ ಚಾವಿ ತುಮಿ ತುಮ್ಚೆಕ್ಡೆ ಥವ್ನ್ ಘೆಟ್ಲ್ಯಾಶಿ, ತುಮಿಬಿ ಭುತ್ತುರ್ ಜಾಯ್‌ನ್ಯಾಶಿ, ಅನಿ ಭುತ್ತುರ್ ಜಾವ್ಕ್ ಖಟ್‍ಪಟ್ತಲ್ಯಾಕ್ನಿಬಿ ತುಮಿ ಜಾವ್ಕ್ ಸೊಡಿನ್ಯಾಶಿ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:52
10 ತಿಳಿವುಗಳ ಹೋಲಿಕೆ  

“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.


ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು:


ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು