Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:53 - ಕನ್ನಡ ಸತ್ಯವೇದವು C.L. Bible (BSI)

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಬಳಿಕ ಆತನು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿನವಾಗಿ ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡಿ ಪ್ರಶ್ನೆ ಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಜೆಜು ತೊ ಜಾಗೊ ಸೊಡುನ್ ಗೆಲ್ಲ್ಯಾ ತನ್ನಾ, ಫಾರಿಜೆವಾ ಅನಿ ಖಾಯ್ದೆ ಶಿಕ್ವುತಲೆ ಗಾವ್ತಾ ತೆಸೆ ಬೊಲುನ್ಗೆತ್, ಅನಿ ಜೆಜುಚ್ಯಾ ವಿಶಯಾತ್ ಎಕಾಮೆಕಾಕ್ ಪರಸ್ನೆ ಇಚಾರುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:53
11 ತಿಳಿವುಗಳ ಹೋಲಿಕೆ  

ಅನಂತರ, ಸತ್ತಮೇಲೆ ಪುನರುತ್ಥಾನ ಇಲ್ಲ, ಎಂದು ವಾದಿಸುತ್ತಿದ್ದ ಸದ್ದುಕಾಯರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು ಈ ಪ್ರಶ್ನೆ ಹಾಕಿದರು:


ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.


ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.


“ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ.


ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು