Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:9 - ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ: ‘ಕೇಳಿರಿ, ನಿಮಗೆ ದೊರಕುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಾಗೆಯೇ ನಾನು ನಿಮಗೆ ಹೇಳುವದೇನಂದರೆ - ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಹುಡುಕಿರಿ, ನಿಮಗೆ ಸಿಕ್ಕುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ತಟ್ಟಿರಿ, ಆಗ ನಿಮಗೆ ಬಾಗಿಲು ತೆರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಕೇಳಿಕೊಳ್ಳಿರಿ ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ ನಿಮಗೆ ಬಾಗಿಲು ತೆರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ; ಇಚಾರಾ, ಅನಿ ತುಮಿ ಘೆತ್ಯಾಶಿ, ದಾರ್ ಬಡ್ವಾ, ಅನಿ ತೆ ತುಮ್ಕಾ ಉಗಡ್ತಾ, ಹುಡ್ಕಾ, ಅನಿ ತುಮ್ಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:9
40 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ.


ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II


ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.


:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.


ನಿಮಗೆ ಹೇಳುವುದನ್ನೇ ಸರ್ವರಿಗೂ ಹೇಳುತ್ತೇನೆ; ಎಚ್ಚರಿಕೆಯಿಂದಿರಿ!” ಎಂದರು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.


ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.


ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು