Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:16 - ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದೇನಂದರೆ ಒಬ್ಬಾನೊಬ್ಬ ಐಶ್ವರ್ಯವಂತನ ಭೂವಿುಯು ಚೆನ್ನಾಗಿ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅನಂತರ ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಒಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಜೆಜುನ್ ತೆಂಕಾ ಹಿ ಕಾನಿ ಸಾಂಗಟ್ಲ್ಯಾನ್ “ಬರೆ ಪಿಕ್ ಯೆಲ್ಲೆ, ಬರೆ ಶೆತ್ ಹೊತ್ತೊ ಎಕ್ ಸಾವ್ಕಾರ್ ಮಾನುಸ್ ಹೊತ್ತೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:16
13 ತಿಳಿವುಗಳ ಹೋಲಿಕೆ  

ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ದುರ್ಜನರಿದೊ ನಿಶ್ಚಿಂತರಾಗಿಹರು I ಸಿರಿಮೇಲೆ ಸಿರಿಯ ಶೇಖರಿಸುತಿಹರು II


ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II


ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು