Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಅವನು ತನ್ನೊಳಗೆ - ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ - ಒಂದು ಕೆಲಸ ಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಐಶ್ವರ್ಯವಂತನು, ‘ನಾನೇನು ಮಾಡಲಿ? ನನ್ನ ಬೆಳೆಯನ್ನೆಲ್ಲಾ ತುಂಬಿಡಲು ನನಗೆ ಸ್ಥಳವಿಲ್ಲವಲ್ಲಾ!’ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನಗಿರುವ ಬೆಳೆಯನ್ನು ಇಡುವುದಕ್ಕೆ ನನಗೆ ಸ್ಥಳವಿಲ್ಲ,’ ಎಂದು ಆಲೋಚಿಸಿ ಹೀಗೆಂದುಕೊಂಡನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೊ “ಮಿಯಾ ಮಾಜೆ ಪಿಕ್ ಖೈ ಭರುನ್ ಥವ್ಚೆ? ಮಿಯಾ ಕಾಯ್ ಕರುಚೆ?” ಮನುನ್ ಯವ್ಜುಕ್‍ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:17
23 ತಿಳಿವುಗಳ ಹೋಲಿಕೆ  

ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು.


ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ.


ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.


ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.


“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.


ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.


ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು.


‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು