Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:19 - ಕನ್ನಡ ಸತ್ಯವೇದವು C.L. Bible (BSI)

19 ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಮಾಕಾಚ್ ಮಿಯಾ “ಬರ್‍ಯಾ ನಸಿಬಾಚ್ಯಾ ಮಾನ್ಸಾ! ಸುಮಾರ್, ವರ್ಸಾನ್ ವರಿಸ್ ಪಾವಿ ಸರ್‍ಕೆ ಬರೆ ಬರೆ ತುಜೆಕ್ಡೆ ಅತ್ತಾ ಹಾಯ್ , ಖಾ, ಫಿ,ಅನಿ ಗಮ್ಮತ್ ಮಾರ್”, ಮನುನ್ ಘೆತಾ ಮನುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:19
39 ತಿಳಿವುಗಳ ಹೋಲಿಕೆ  

ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.


ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ !


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ.


ಸಿರಿಬಂದಾಗ ಕೊರತೆಯಿರದು ಹೊಗಳಿಕೆಗೆ I ಆತ್ಮಸ್ತುತಿ, ಮುಖಸ್ತುತಿ, ಇವುಗಳ ಮೆರೆತಕೆ II


ಅವರು ಅಲ್ಲಿಗೆ ಹೋದಾಗ ಆ ದಾಳಿಕಾರರು ತಮಗೆ ಫಿಲಿಷ್ಟಿಯ ಹಾಗು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ್ದ ದೊಡ್ಡಕೊಳ್ಳೆಯ ನಿಮಿತ್ತ ಸಂತೋಷಿಸಿ, ತಿಂದು, ಕುಡಿದು, ಕುಣಿದಾಡುತ್ತಾ ಅಲ್ಲಿನ ಬಯಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.


ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ನೀವು ಹೆಚ್ಚಳಪಡುವುದು ‘ಲೊದೆಬಾರಿನ’ ಗೆಲುವಿನಲ್ಲಿ! ಸ್ವಬಲದಿಂದಲೇ ಕರ್ನಾಯಿಮನ್ನು ಜಯಿಸಿದ್ದೇವೆಂದು ಕೊಚ್ಚಿಕೊಳ್ಳುವುದರಲ್ಲಿ!


‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ.


ಬುದ್ಧಿವಂತರ ಕಿರೀಟ ಅವರ ಜ್ಞಾನವೇ; ದಡ್ಡರ ಶಿರಮುಕುಟ ಅವರ ದಡ್ಡತನವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು