Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ದೆವಾನ್ ತೆಕಾ “ಪಿಶ್ಯಾ! ಆಜ್ ರಾಚ್ಚೆ ತಿಯಾ ತುಜೊ ಜಿವ್ ಮಾಕಾ ಪರ್ತುನ್ ದಿವ್ಕ್ ಪಾಜೆ; ತನ್ನಾ ತಿಯಾ ತುಕಾ ಮನುನ್ ಗೊಳಾ ಕರುಕ್ ಥವಲ್ಲೆ ಹೆ ಸಗ್ಳೆ ಕೊನಾಚೆ ಹೊತಾ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:20
35 ತಿಳಿವುಗಳ ಹೋಲಿಕೆ  

ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!


ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡು ಒಯ್ಯುವುದಿಲ್ಲ.


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಲಿಲ್ಲವೇ?


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಆದರೆ ಆ ಜನಕೆ ಆಶೆ ಕೈಗೂಡುವುದಕೆ ಮುನ್ನ I ಬಾಯಿಗೆ ಬಂದ ತುತ್ತು ಹೊಟ್ಟೆಗಿಳಿಯುವುದಕ್ಕೆ ಮುನ್ನ II


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II


ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.


ಒಬ್ಬ ಹಣಕೂಡಿಸಿದ್ದರೂ ಘನದರಿದ್ರನಿರಬಹುದು; ಮತ್ತೊಬ್ಬ ಹಣವೆಚ್ಚಮಾಡಿ ಕಡುಬಡವನಾಗಿದ್ದರೂ ಐಶ್ವರ್ಯವಂತನಾಗಿರಬಹುದು.


ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ನೀವು ಹೆಚ್ಚಳಪಡುವುದು ‘ಲೊದೆಬಾರಿನ’ ಗೆಲುವಿನಲ್ಲಿ! ಸ್ವಬಲದಿಂದಲೇ ಕರ್ನಾಯಿಮನ್ನು ಜಯಿಸಿದ್ದೇವೆಂದು ಕೊಚ್ಚಿಕೊಳ್ಳುವುದರಲ್ಲಿ!


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು