Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:21 - ಕನ್ನಡ ಸತ್ಯವೇದವು C.L. Bible (BSI)

21 “ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತನಗೋಸ್ಕರ ದ್ರವ್ಯವನ್ನಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತ ಆಗದಿರುವವನು ಇವನಂತೆಯೇ ಇರುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಶೆ ಜೆಜುನ್ “ಸಾವ್ಕಾರ್ಕಿ ಗೊಳಾ ಕರುಕ್ ಘೆವ್ನ್ ಹೊತ್ತಿ ಲೊಕಾ, ದೆವಾಚ್ಯಾ ಇದ್ರಾಕ್ ಸಾವ್ಕಾರ್ ನ್ಹಯ್”, ಮನುನ್ ಕಾನಿ ಸಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:21
14 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು?


“ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಒಬ್ಬ ಹಣಕೂಡಿಸಿದ್ದರೂ ಘನದರಿದ್ರನಿರಬಹುದು; ಮತ್ತೊಬ್ಬ ಹಣವೆಚ್ಚಮಾಡಿ ಕಡುಬಡವನಾಗಿದ್ದರೂ ಐಶ್ವರ್ಯವಂತನಾಗಿರಬಹುದು.


ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು