Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:23 - ಕನ್ನಡ ಸತ್ಯವೇದವು C.L. Bible (BSI)

23 ಏತಕ್ಕೆಂದರೆ ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಹಾರಕ್ಕಿಂತ ಪ್ರಾಣ ಹೆಚ್ಚು ಪ್ರಾಮುಖ್ಯವಾದದ್ದು. ಬಟ್ಟೆಗಿಂತಲೂ ದೇಹ ಹೆಚ್ಚು ಪ್ರಾಮುಖ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಊಟಕ್ಕಿಂತ ಜೀವನವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜಿವ್; ಜೆವ್ನಾನ್‍ಬಿ ಲೈ ಕಿಮ್ತಿಚೊ. ಅನಿ ಆಂಗ್ ನೆಸ್ತಲ್ಯಾ ಕಪ್ಡ್ಯಾಂಚಾನ್ಕಿ ಲೈ ಕಿಮ್ತಿಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:23
9 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.


ಹಣವಂತನ ಪ್ರಾಣರಕ್ಷಣೆಗೆ ಅವನ ಹಣವೇ ಈಡು; ಬಡವನಿಗೆ ಈಡಿನ ಬೆದರಿಕೆಯೂ ಇರದು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ,” ಎಂದು ಅಪ್ಪಣೆಕೊಟ್ಟರು. ಕೂಡಲೆ ಸೈತಾನನು ಸರ್ವೇಶ್ವರರ ಸನ್ನಿಧಾನದಿಂದ ಹೊರಟುಹೋದನು.


ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.


ಪ್ರತಿಯೊಬ್ಬನೂ ಸಾಕಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದರು.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು