Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:33 - ಕನ್ನಡ ಸತ್ಯವೇದವು C.L. Bible (BSI)

33 ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಿಮಗಿರುವದನ್ನು ಮಾರಿಬಿಟ್ಟು ದಾನಾ ಕೊಡಿರಿ; ಹಳೇವಾಗದಂಥ ಹಮ್ಮೀಣಿಗಳನ್ನು ಮಾಡಿಕೊಂಡು ಪರಲೋಕದಲ್ಲಿ ಲಯವಾಗದ ದ್ರವ್ಯವನ್ನು ಇಟ್ಟುಕೊಳ್ಳಿರಿ. ಅಲ್ಲಿ ಕಳ್ಳನು ಸಮೀಪಕ್ಕೆ ಬರುವದಿಲ್ಲ; ಅದು ನುಸಿಹಿಡಿದು ನಾಶವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತುಮ್ಚೆ ಮನುನ್ ಹೊತ್ತೆ ಸಗ್ಳೆ ಇಕಾ, ಅನಿ ಯಲ್ಲೆ ಪೈಸೆ ಗರಿಬಾಕ್ನಿ ದಿವಾ, ಕೊನಾಕ್ಬಿ ಪಿಂಜುಕ್ ಹೊಯ್‍ ನಸಲ್ಲ್ಯಾ ಪಿಸ್ವಿಯಾ ತುಮ್ಕಾಚ್ ತುಮಿ ತಯಾರ್ ಕರುನ್ ಘೆವಾ, ಅನಿ ತುಮ್ಚೆ ಬದಿಕ್ ಸರ್‍ಗಾತ್ ಗೊಳಾ ಕರುನ್ ಥವಾ, ಥೈ ತೆ ಕನ್ನಾಚ್ ಕಮಿ ಹೊಯ್ನಾ! ಕಶ್ಯಾಕ್ ಮಟ್ಲ್ಯಾರ್, ತೆ ಬದಿಕ್ ಚೊರಾಕ್ ಕನ್ನಾಚ್ ಗಾವಿನಾ, ಅನಿ ಥೈ ಕುಸಡ್ ಲಾಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:33
14 ತಿಳಿವುಗಳ ಹೋಲಿಕೆ  

ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು.


ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.


“ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಒಬ್ಬ ಹಣಕೂಡಿಸಿದ್ದರೂ ಘನದರಿದ್ರನಿರಬಹುದು; ಮತ್ತೊಬ್ಬ ಹಣವೆಚ್ಚಮಾಡಿ ಕಡುಬಡವನಾಗಿದ್ದರೂ ಐಶ್ವರ್ಯವಂತನಾಗಿರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು