Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:37 - ಕನ್ನಡ ಸತ್ಯವೇದವು C.L. Bible (BSI)

37 ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಧನಿ ಪರ್‍ತುನ್ ಯೆಲ್ಲ್ಯಾ ತನ್ನಾ ಜಾಗೆ ರ್‍ಹಾವ್ನ್, ತಯಾರ್ ಹೊತ್ತ್ಯಾ ಆಳಾಂಚೆ ಕವ್ಡೆ ಬರೆ! ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ತೊ ಅಪ್ನಾಚಿ ವೈಲಿ ಆಂಗಿ ಕಾಡುನ್ ಥವ್ತಾ, ಅನಿ ತೆಂಕಾ ಬಸುಕ್ ಲಾವ್ತಾ. ಅನಿ ತೆಂಕಾ ಅಪ್ನಿಚ್ ಜೆವಾನ್ ವಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:37
25 ತಿಳಿವುಗಳ ಹೋಲಿಕೆ  

ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ.


ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ?


ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ.


ಈ ಇಬ್ಬರಲ್ಲಿ ದೊಡ್ಡವನು ಯಾರು - ಊಟ ಮಾಡುವವನೋ? ಊಟ ಬಡಿಸುವವನೋ? ಖಂಡಿತವಾಗಿ ಊಟ ಮಾಡುವವನು. ಆದರೂ ಊಟ ಬಡಿಸುವ ಊಳಿಗದವನಂತೆ ನಾನು ನಿಮ್ಮ ನಡುವೆ ಇದ್ದೇನೆ.


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು