ಲೂಕ 12:42 - ಕನ್ನಡ ಸತ್ಯವೇದವು C.L. Bible (BSI)42 ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ತನ್ನಾ ಧನಿಯಾನ್ ಅಶೆ ಜಾಲ್ಯಾರ್ ವಿಶ್ವಾಸಾಚೊ ಅನಿ ಶಾನೊ ಆಳ್ ಕೊನ್? ತೊ ಕೊನ್ ಕಾಯ್ ಮಟ್ಲ್ಯಾರ್, ಜೆ ಕೊನಾಕ್, ಧನಿ, ಘರಾಚಿ ಸಗ್ಳಿ ಜವಾಬ್ದಾರಿ, ಅನಿ ಹುರಲ್ಲ್ಯಾ ಆಳಾಕ್ನಿ, ಸಮಾ ಎಳಾರ್ ಜೆವಾನ್ ವಾಟುನ್ ದಿವ್ಕ್ ಮನುನ್ ನೆಮ್ತಾ, ತೊಚ್. ಅಧ್ಯಾಯವನ್ನು ನೋಡಿ |