Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:45 - ಕನ್ನಡ ಸತ್ಯವೇದವು C.L. Bible (BSI)

45 “ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಖರೆ, ಜರ್ ತೊ ಆಳ್, ಅಪ್ನಾಚೊ ಧನಿ ಪರ್ತುನ್ ಯೌಕ್ ಲೈ ಎಳ್ ಹೊತಾ ಮನುನ್ ಯವ್ಜುನ್ ಘೆವ್ನ್, ಹುರಲ್ಲ್ಯಾ ಆಳಾಕ್ನಿ ಘೊಮನುಸ್ ಅನಿ ಬಾಯ್ಕೊಮನುಸ್ ಮನಿನಸ್ತಾನಾ ಮಾರ್‍ತಾ, ಅನಿ ಖಾತಾ, ಫಿತಾ, ಅನಿ ಫಿದೊಡೊ ಹೊವ್ನ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:45
31 ತಿಳಿವುಗಳ ಹೋಲಿಕೆ  

ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.


ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


ನಿದ್ರೆಯೂ ಕುಡುಕತನವೂ ರಾತ್ರಿಗೆ ಸಂಬಂಧಿಸಿದವುಗಳು.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು.


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


“ನರಪುತ್ರನೇ, ‘ಕ್ಲುಪ್ತಕಾಲ ದೂರ ದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ’ ಎಂಬುದಾಗಿ ಇಸ್ರಯೇಲ್ ನಾಡಿನವರು ಆಡಿಕೊಳ್ಳುವ ಈ ಗಾದೆ ಏನು?


ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.


“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.


ಸುರಿಸುವೆನು ಎನ್ನ ದಾಸದಾಸಿಯರ ಮೇಲೂ ಎನ್ನಾತ್ಮವನು ಆ ದಿನಗಳಲಿ, ಪ್ರವಾದಿಸುವರಾಗ, ಅವರು;


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು