Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:52 - ಕನ್ನಡ ಸತ್ಯವೇದವು C.L. Bible (BSI)

52 ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಹೇಗಂದರೆ - ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರು, ಈ ಮೇರೆಗೆ ಭೇದವುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಇಂದಿನಿಂದ, ಐದು ಜನರಿರುವ ಕುಟುಂಬದಲ್ಲಿ ಭೇದ ಉಂಟಾಗುವುದು. ಅವರಲ್ಲಿ ಮೂವರು ಇಬ್ಬರಿಗೆ ವಿರೋಧವಾಗುವರು ಮತ್ತು ಇಬ್ಬರು ಮೂವರಿಗೆ ವಿರೋಧವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಹೇಗೆಂದರೆ ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯಲ್ಲಿ ಇಬ್ಬರಿಗೆ ವಿರೋಧವಾಗಿ ಮೂವರೂ ಮೂವರಿಗೆ ವಿರೋಧವಾಗಿ ಇಬ್ಬರೂ ವಿಭಾಗವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಅತ್ತಾಚ್ಯಾನ್, ಪಾಚ್ ಜಾನಾ ಹೊತ್ತ್ಯಾತ್ಲೆ, ತಿಗೆಜಾನಾ ದೊಗ್ಯಾಂಚ್ಯಾ ವರ್‍ತಿ ಅನಿ ದೊಗೆ ಜಾನಾ ತಿಗ್ಯಾಂಚ್ಯಾ ವರ್‍ತಿ ಪರ್ತುನ್ ಪಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:52
12 ತಿಳಿವುಗಳ ಹೋಲಿಕೆ  

ಅವನು ಹೇಳಿದ್ದು ಕೆಲವರಿಗೆ ಮನದಟ್ಟಾಯಿತು; ಮತ್ತೆ ಕೆಲವರು ನಂಬದೆಹೋದರು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.


ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು