Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:58 - ಕನ್ನಡ ಸತ್ಯವೇದವು C.L. Bible (BSI)

58 ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಮುಂದಕ್ಕೆ ಹೋಗುತ್ತಿರುವಾಗ ದಾರಿಯಲ್ಲಿಯೇ ತಂಟೆಹರಿಸಿಕೊಳ್ಳಲು ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು; ನ್ಯಾಯಾಧಿಪತಿಯು ನಿನ್ನನ್ನು ಸೆರೇಯಜಮಾನನ ವಶಕ್ಕೆ ಒಪ್ಪಿಸಾನು; ಸೆರೇಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಒಬ್ಬನು ನಿಮ್ಮ ಮೇಲೆ ದಾವೆ ಹೂಡಲು ನ್ಯಾಯಾಲಯಕ್ಕೆ ಹೋಗುತ್ತಿರುವಾಗ ನಿಮ್ಮ ಸಮಸ್ಯೆಯನ್ನು ದಾರಿಯಲ್ಲಿಯೇ ಪರಿಹರಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ಇಲ್ಲವಾದರೆ, ಅವನು ನಿಮ್ಮನ್ನು ನ್ಯಾಯಾಧೀಶನ ಬಳಿಗೆ ಕೊಂಡೊಯ್ಯುವನು. ನ್ಯಾಯಾಧೀಶನು ನಿಮ್ಮನ್ನು ಸೆರೆಮನೆಗೆ ಹಾಕಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ಕೊನ್ಬಿ ಎಕ್ಲೊ ತುಮ್ಚೆ ವರ್‍ತಿ ಪಿರ್ಯಾದ್ ಘಾಲುನ್ ತುಮ್ಕಾ ನ್ಯಾಯ್ ನಿರ್‍ನಯ್‍ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತಾ ಜಾಲ್ಯಾರ್, ತೆನಿ ತುಮ್ಕಾ ತ್ಯಾ ನ್ಯಾಯ್ ಕರ್‍ತಲ್ಯಾಕ್ಡೆ ಘೆವ್ನ್ ಜವ್ಚ್ಯಾ ಅದ್ದಿಚ್ ತೆಚೆಕ್ಡೆ ರಾಜಿ-ಕುಸಿ-ಹೊವಾ, ಜರ್ ತುಮಿ ಅಶೆ ಕರುಕ್ನ್ಯಾಶಿ, ತರ್ ತೊ ತುಮ್ಕಾ ನ್ಯಾಯ್ ದಿತಲ್ಯಾಚ್ಯಾ ತಾಬೆತ್ ದಿತಾ,ಅನಿ ನ್ಯಾಯ್‍ ನಿರ್‍ನಯ್ ಕರ್‍ತಲೊ, ತುಮ್ಕಾ ಪೊಲಿಸಾಂಚ್ಯಾ ಹಾತಿತ್ ದಿತಾ, ಅನಿ ತುಮ್ಕಾ ಬಂದಿಖಾನ್ಯಾತ್ ಘಾಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:58
20 ತಿಳಿವುಗಳ ಹೋಲಿಕೆ  

ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.


ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ಅಲ್ಲಿ ಸಜ್ಜನನಿಗೆ ಮಾತ್ರ ವಾದಿಸಲು ಸಾಧ್ಯ. ನಿತ್ಯವಾದ ಬಿಡುಗಡೆ ಆ ನ್ಯಾಯಾಧೀಶನಿಂದ ನನಗೆ ಲಭ್ಯ.


ದೇವರ ಚಿತ್ತಕ್ಕೆ ಮಣಿದು ಸಮಾಧಾನದಿಂದಿರು ಇದರಿಂದ ನಿನಗೆ ಶುಭವಾಗುವುದು.


ಆ ಒಂದು ಸಾವಿರ ವರ್ಷಗಳು ಮುಗಿದ ನಂತರ ಸೈತಾನನನ್ನು ಬಂಧನದಿಂದ ಬಿಡುಗಡೆ ಮಾಡಲಾಗುವುದು.


ಆಧ್ಯಾತ್ಮಿಕವಾಗಿಯೇ ತೆರಳಿ ಸೆರೆಯಲ್ಲಿದ್ದ ಆತ್ಮಗಳಿಗೆ ಶುಭಸಂದೇಶವನ್ನು ಬೋಧಿಸಿದರು.


ನನ್ನ ಮರಣಾ ನಂತರವೂ ಈ ವಿಷಯಗಳನ್ನು ನೀವು ಯಾವಾಗಲೂ ಜ್ಞಾಪಕಕ್ಕೆ ತಂದುಕೊಳ್ಳಲು ಸಾಧ್ಯವಾಗುವಂತೆ ಈಗಲೇ ನನ್ನಿಂದಾದಷ್ಟು ಪ್ರಯತ್ನಿಸುತ್ತೇನೆ.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು