Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:12 - ಕನ್ನಡ ಸತ್ಯವೇದವು C.L. Bible (BSI)

12 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಆಕೆಯನ್ನು ಕಂಡು, ತನ್ನ ಬಳಿಗೆ ಕರೆದು, “ಅಮ್ಮಾ, ನಿನ್ನ ಕಾಯಿಲೆ ನಿನ್ನನ್ನು ಬಿಟ್ಟುಹೋಗಿದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, “ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜುನ್ ತ್ಯಾ ಬಾಯ್ಕೊಮನ್ಸಿಕ್ ಬಲ್ವುನ್ ಅನಿ “ಬಾಯ್ಕೊಮನ್ಸಿ, ತಿಯಾ ತುಜ್ಯಾ ಶಿಕಾತ್ನಾ ಸ್ವತಂತ್ರ್ ಹೊಲೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:12
9 ತಿಳಿವುಗಳ ಹೋಲಿಕೆ  

ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ಸಂಜೆಯಾಯಿತು, ದೆವ್ವ ಹಿಡಿದ ಅನೇಕರನ್ನು ಯೇಸುವಿನ ಬಳಿಗೆ ಕರೆತರಲಾಯಿತು. ಯೇಸು ತಮ್ಮ ಒಂದು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದರು. ಮಾತ್ರವಲ್ಲ, ರೋಗಪೀಡಿತರೆಲ್ಲರನ್ನೂ ಗುಣಪಡಿಸಿದರು.


ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.


ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿ ಮಾಡಿರಿ; ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ; ಬಲಹೀನನು ಸಹ ಬಲಾಢ್ಯನಂತೆ ಯುದ್ಧಕ್ಕೆ ನಿಂತುಕೊಳ್ಳಲಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ.


ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು