Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:14 - ಕನ್ನಡ ಸತ್ಯವೇದವು C.L. Bible (BSI)

14 ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹ್ಯಾ ಬಾಯ್ಕೊಮನ್ಸಿಕ್ ಜೆಜುನ್ ಸಬ್ಬತಾಚ್ಯಾ ದಿಸಿ ಗುನ್ ಕರಲ್ಲೆ ಬಗುನ್ ಸಿನಾಗೊಗಾಚ್ಯಾ ಅದಿಕಾರ್‍ಯಾಕ್ ರಾಗ್ ಯೆಲೊ, ಅನಿ ತೊ ಲೊಕಾಕ್ನಿ “ಅಮ್ಕಾ ಕಾಮ್ ಕರುಕ್, ಸಾ ದಿಸಾ ಹಾತ್, ತ್ಯಾ ದಿಸಾತ್ನಿ ಯೆವಾ, ಅನಿ ತುಮ್ಕಾ ತುಮಿ ಗುನ್ ಕರುನ್ ಘೆವ್ನ್ ಜಾಂವಾ, ಸಾಬ್ಬಾತಾಚ್ಯಾ ದಿಸಿ ಯೌನಕಾಸಿ!” ಮನುನ್ ಸಾಂಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:14
20 ತಿಳಿವುಗಳ ಹೋಲಿಕೆ  

ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.


ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು.


ಅವನನ್ನು ಸಬ್ಬತ್‍ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.


ಅಷ್ಟರಲ್ಲಿ ಪ್ರಾರ್ಥನಾಮಂದಿರದ ಅಧಿಕಾರಿ ಯಾಯೀರನೆಂಬವನು ಅಲ್ಲಿಗೆ ಬಂದು, ಯೇಸುವಿನ ಪಾದಕ್ಕೆರಗಿ, ತನ್ನ ಮನೆಗೆ ಬರಬೇಕೆಂದು ವಿನಂತಿಸಿದನು


ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ.


ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.


ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.


ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.


ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.


ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.


ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು