Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:15 - ಕನ್ನಡ ಸತ್ಯವೇದವು C.L. Bible (BSI)

15 ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಮಾತನ್ನು ಕೇಳಿ ಸ್ವಾವಿುಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನೂ ಸಬ್ಬತ್‍ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಧನಿಯಾನ್ ತೆಕಾ “ತುಮಿ ಕುಸ್ಡ್ಯಾನೊ! ತುಮ್ಚ್ಯಾತ್ಲೊ ಕೊನ್ಬಿ ಸಬ್ಬತಾಚ್ಯಾ ದಿಸಿ,ತುಮ್ಚ್ಯಾ ಗಾಡ್ವಾಕ್ ನಾಹೊಲ್ಯಾರ್, ಬೈಲಾಕ್ ಗೊಟ್ಯಾತ್ನಾ ಸೊಡ್ವುನ್ ಪಾನಿಯಾಕ್ ನ್ಹೆಯ್‌ನ್ಯಾಶಿ ಕಾಯ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:15
16 ತಿಳಿವುಗಳ ಹೋಲಿಕೆ  

ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್‍ದಿನವಾಗಿದ್ದರೂ ನೀವು ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?” ಎಂದು ಕೇಳಿದರು.


ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -


ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”


ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.


ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.


ಭಕ್ತಿಹೀನನು ಜನರನು ಆಳಬಾರದು ಅಂಥವನು ಜನರಿಗೆ ಉರುಲಾಗಬಾರದು.


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು