Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:27 - ಕನ್ನಡ ಸತ್ಯವೇದವು C.L. Bible (BSI)

27 ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಅವನು - ನೀವು ಎಲ್ಲಿಯವರೋ ನಿಮ್ಮ ಗುರುತು ನನಗಿಲ್ಲ; ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟುಹೋಗಿರಿ ಎಂದು ನಿಮಗೆ ಹೇಳುತ್ತೇನೆ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಅವನು ನಿಮಗೆ, ‘ನೀವು ಯಾರೋ ನನಗೆ ಗೊತ್ತಿಲ್ಲ! ನೀವು ಎಲ್ಲಿಯವರು? ಇಲ್ಲಿಂದ ಹೊರಟುಹೋಗಿ! ನೀವೆಲ್ಲರೂ ಪಾಪಕೃತ್ಯಗಳನ್ನು ಮಾಡುವ ಜನರು!’ ಎಂದು ನಿಮಗೆ ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಅನಿಬಿ ತೊ “ತುಮಿ ಕೊನ್ ಅನಿ ತುಮಿ ಖೈತ್ನಾ ಯೆಲ್ಯಾಶಿ ಮನುನ್ ಮಾಕಾ ಗೊತ್ತ್ ನಾ! ಮಾಜೆಕ್ನಾ ಧುರ್ ಜಾವಾ ಬುರ್ಶ್ಯಾ ಲೊಕಾನು!” ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:27
15 ತಿಳಿವುಗಳ ಹೋಲಿಕೆ  

“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II


ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು